ಬೆಂಗಳೂರು:ರಾಜ್ಯಾದಾದ್ಯಂತ ಸೆಪ್ಟೆಂಬರ್ 9 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದಿನಿಂದ ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ.
ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದು ತಿಂಗಳಿನಿಂದ ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದಿದೆ.
ಅಪಾಯಕಾರಿ ವೇಗದ ಗಾಳಿಯ ಮುನ್ಸೂಚನೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ಕೂಡ ಭಾರಿ ಮಳೆಯ ಬಗ್ಗೆ ಎಚ್ಚರಿಕೆ ನೀಡಿದೆ.