Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ, ಇಂದು ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಲಿಗರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಅಲ್ಲದೇ ರವಿ ಅವರ ಅಣುಕು ಶವಯಾತ್ರೆ ಮಾಡಿ, ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ನೀವೂ ಅಪಘಾತ ಮಾಡಿದ್ದೀರಿ. ಅಂದ ಮೇಲೆ ನೀವೂ ಕೊಲೆಗಡುಕರಾಗುತ್ತೀರಿ ಎಂದು ಹೇಳಿದ್ದರು.
ಇದಕ್ಕೆ ಸಿ.ಟಿ.ರವಿ ಹೆಬ್ಬಳಾಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದರು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದರು. ಬಳಿಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿ, ರವಿ ಅವರನ್ನು ಬಂಧಿಸಲಾಗಿತ್ತು. ಹಲವು ಹೈ ಡ್ರಾಮಾ ನಡೆದ ಬಳಿಕ ಇಂದು ಸಂಜೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ಬಳಿಕ, ಕೋರ್ಟ್ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು.