www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ ಅರ್ಥವತ್ತಾಗಿ ಆಚರಿಸಿದ್ದಾರೆ.
ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ ಹುಬ್ಬಳ್ಳಿಯ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ಎಂಬುವರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಿದ್ರು. ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸುಮಾರು 25 ಹೆಲ್ಮೆಟ್ ಹಂಚಿದ ಮಂಜನಾಥ್ ಕಾರ್ಯಕ್ಕೆ ಸಂಚಾರ ಪೊಲೀಸರು ಶ್ಲಾಘಿಸಿದ್ದಾರೆ. .
ನಗರದ ಚೆನ್ನಮ್ಮ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಲಾಯ್ತು. ಇನ್ನು ಮಂಜುನಾಥ್ ಕಳೆದ ವರ್ಷವೂ ಕೂಡ ಇದೇ ರೀತಿ ಇಪ್ಪತ್ತೈದು ಹೆಲ್ಮೆಟ್ ಹಂಚಿದ್ದರು. ಒಟ್ಟಾರೆ ತಮ್ಮ ಪುತ್ರಿಯ ಹುಟ್ಟುಹಬ್ಬವನ್ನು ಅರ್ಥವತ್ತಾಗಿ ಆಚರಿಸಿದ ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಇತರರಿಗೆ ಮಾದರಿಯಾಗಿದ್ದಾರೆ.
ಕರ್ನಾಟಕ ಟಿವಿ – ಹುಬ್ಬಳ್ಳಿ




