Sunday, December 22, 2024

Latest Posts

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

- Advertisement -

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.

ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ.

ತಮ್ಮ ಪಾತ್ರದ ಬಗ್ಗೆ ಹೆಚ್ಚೇನೂ ಗುಟ್ಟುಬಿಟ್ಟು ಕೊಡದ ರಚನಾ, ಬಬ್ಲಿ ಪಾತ್ರದ ಮೂಲಕ ಅಭಿಮಾನಿಗಳನ್ನು ರಂಜಿಸುವುದಾಗಿ ಹೇಳಿಕೊಂಡಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ.

ಸದ್ಯ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ನಾಯಕಿಯಾಗಿ ನಟಿಸ್ತಿರುವ ರಚನಾ ರೈ, ಈಗಾಗಲೇ ಸೆಕೆಂಡ್ ಶೆಡ್ಯೂಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ.


ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್​ ಆ್ಯಕ್ಷನ್ ಎಂಟರ್​ಟೇನರ್ ವಾಮನ ಸಿನಿಮಾಗೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

- Advertisement -

Latest Posts

Don't Miss