ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹೈ ಅಲರ್ಟ್: ಪೊಲೀಸ್ ಬಂದೋಬಸ್ತ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಹೌದು.. ಹುಬ್ಬಳ್ಳಿಯ ಗಣಪತಿ ವಿಸರ್ಜನೆಗೆ ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗಿದ್ದು, ಶಾಂತಿಯುತ ಗಣಪತಿ ವಿಸರ್ಜನೆ ಮಾಡುವ ಸದುದ್ದೇಶದಿಂದ ಕಮೀಷನರೇಟ್ ನಿಂದ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲದೇ ಹುಬ್ಬಳ್ಳಿಯ ಗಣಪತಿ ವಿಸರ್ಜನೆಗೆ ನಾಡಿನ ಮೂಲೆ ಮೂಲೆಯಿಂದ ಜನರು ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ.

ಈಗಾಗಲೇ ಚನ್ನಮ್ಮ ವೃತ್ತ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹದ್ದಿನ ಕಣ್ಣು ಇರಿಸಲಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲು ಕೂಡ ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.

About The Author