Thursday, November 7, 2024

Latest Posts

ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?

- Advertisement -

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ನೀಡಿದ್ದು, ಆ ಮಹಿಳೆಯರನ್ನು ಯಾರೂ ಭೇಟಿಯಾಗಬಾರದು ಎಂದು ಹೇಳಿದೆ. ಆದರೂ ಕೂಡ ಬಿಜೆಪಿ ನಾಯಕರು ಆ ಮಹಿಳೆಯರನ್ನು ಭೇಟಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ.

ಸಂತ್ರಸ್ತ ಮಹಿಳೆಯು ಮಾನಸಿಕವಾಗಿ ತೀವ್ರವಾಗಿ ಜರ್ಝರಿತರಾಗಿರುವ ಹಿನ್ನೆಲೆಯಲ್ಲಿ ಹಾಗೂ ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಇಂದು ಬೆಳಿಗ್ಗೆ ಸೂಚಿಸಿದ್ದರು. ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು‌ ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು‌ ಗಮನಾರ್ಹ.

ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ. ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.

ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

- Advertisement -

Latest Posts

Don't Miss