Saturday, July 27, 2024

Latest Posts

High Court : ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರ ಇಂಜಿನಿಯರ್ ಗಳಿಗೆ ಎಚ್ಚರಿಕೆ..!

- Advertisement -

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು ಮುಚ್ಚುವಾಗ ಗುಣಮಟ್ಟದಲ್ಲಿ ರಾಜಿ‌ ಮಾಡಿಕೊಳ್ಳುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸಿ ರಸ್ತೆ ಗುಂಡಿ ಮುಚ್ಚುತ್ತೇವೆ.182 ರಸ್ತೆಗಳನ್ನು ಪೈಥಾನ್ ಯಂತ್ರ (Python Machine) ಬಳಸಿ ರಿಪೇರಿ ಮಾಡಲಾಗುತ್ತಿದೆ.ಸಂಚಾರ ದಟ್ಟಣೆ ಹೆಚ್ಚಿರುವೆಡೆ ಪೈಥಾನ್ ಬಳಸುತ್ತಿದ್ದೇವೆ. ಹೊಸ ಟೆಂಡರ್ ಗೆ ಯಾರೂ ಬಿಡ್ ಸಲ್ಲಿಸಿಲ್ಲ‌. ಆದ್ದರಿಂದ ಪೈಥಾನ್ ಯಂತ್ರಕ್ಕಾಗಿ ಮತ್ತೆ ಟೆಂಡರ್ ಕರೆಯುತ್ತೇವೆ ಎಂದರು. ಆಗ ನ್ಯಾಯಪೀಠ, ರಸ್ತೆ ಗುಂಡಿ ಮುಚ್ಚಲು ಉತ್ತಮ ತಂತ್ರಜ್ಞಾನ ಬಳಸಿ,ಬರೀ ಕಣ್ಣೊರೆಸುವ ತಂತ್ರ ಇಲ್ಲಿ‌ ನಡೆಯುವುದಿಲ್ಲ. ರಸ್ತೆಗುಂಡಿ ಸಮಸ್ಯೆಗೆ ಪರಿಹಾರ‌ ಬೇಕು.ಪೈಥಾನ್ ಯಂತ್ರ ಬಳಕೆಗೆ ಮಾ.15 ರೊಳಗೆ ವರದಿ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತು. ಕಳೆದ ವಿಚಾರಣೆ ವೇಳೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ಸಹಿತ ವಾರೆಂಟ್ ಹೊರಡಿಸಿದ್ದ ಹಿನ್ನೆಲೆಯಲ್ಲಿ ಪಾಲಿಕೆಯ ಪ್ರಧಾನ ಇಂಜಿನಿಯರ್ ಕೆ.ಪ್ರಭಾಕರ್ (K. Prabhakar as Engineer) ಖುದ್ದು ಹಾಜರಾಗಿ ಬೇಷರತ್ ಕ್ಷಮೆ ಯಾಚಿಸಿದರು.ಅವರ ಕ್ಷಮೆಯನ್ನು ಒಪ್ಪುವ ಮೊದಲು ನ್ಯಾಯಪೀಠ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಕೊನೆಯ ನ್ಯಾಯಪೀಠ ಸುದೀರ್ಘ ಬಾಳಿಕೆಯ ರಸ್ತೆಗಳನ್ನು ನಿರ್ಮಿಸದಿದ್ದರೆ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ ನೀಡಿತು.

- Advertisement -

Latest Posts

Don't Miss