ಹಿಜಾಬ್ ವಿವಾದ (Hijab Controversy) ಕುರಿತಂತೆ ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ನಡೆಯುತ್ತಿದ್ದು, ತೀವ್ರ ಸ್ವರೂಪವನ್ನು ಪಡೆದುಕೊಂಡ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅನುಮತಿ ಕೋರಿ ವಿದ್ಯಾರ್ಥಿನಿಯೊಬ್ಬರು ಅರ್ಜಿಯನ್ನು ಹಾಕಿದ್ದರು. ಈಗ ಹೈಕೋರ್ಟ್ ನಲ್ಲಿ ಚರ್ಚೆ ನಡೆಯುತ್ತಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದರು. ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ(Rituraj Awasthi), ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸುತ್ತಿದೆ.ಹಿಜಾಬ್ ಕಾರಣಕ್ಕಾಗಿ ಶಾಲಾ-ಕಾಲೇಜುಗಳು ಮುಚ್ಚುವುದು ಸೂಕ್ತವಲ್ಲ, ಶೀಘ್ರದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ಸರಕಾರಕ್ಕೆ ಸೂಚನೆಯನ್ನು ನೀಡಲಾಗಿದೆ.