Friday, July 11, 2025

Latest Posts

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

- Advertisement -

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡು ಈ ಪ್ರಕರಣ ದೊಡ್ಡ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್​ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್​​ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.

ಇನ್ನು ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ನಡೆಯಿತು. ಇದುವರೆಗೂ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ ಹಾಗೂ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss