Tuesday, September 23, 2025

Latest Posts

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

- Advertisement -

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ.

ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಎಲ್ಲಾ ಭಾಷೆಯ ಸಿನಿಮಾ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿತ್ತು. ಆದರೆ, ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೊಂಬಾಳೆ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು‌. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜೊತೆಗೆ ವಿಚಾರಣೆಯನ್ನು ಮುಂದೂಡಿದೆ.

ರಾಜ್ಯ ಸರ್ಕಾರ ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025’ ಅನ್ನು ಇತ್ತೀಚೆಗೆ ಜಾರಿಗೆ ತಂದಿತ್ತು. ಈ ನಿಯಮದ ಪ್ರಕಾರ, ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಗರಿಷ್ಠ 200 ರೂಪಾಯಿ ನಿಗದಿಪಡಿಸಬೇಕಿತ್ತು. ಆದರೆ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್‌ ಆಫ್‌ ಇಂಡಿಯಾ, ಹೊಂಬಾಳೆ ಫಿಲ್ಮ್ಸ್ಧಿನ ವಿಜಯ್‌ ಕಿರಗಂದೂರು, ಪಿವಿಆರ್‌ ಐನಾಕ್ಸ್‌ ಲಿಮಿಟೆಡ್‌, ವಿಕೆ ಫಿಲಂಸ್‌, ಕೀ ಸ್ಟೋನ್‌ ಎಂಟರ್‌ಟೈನ್ಮೆಂಟ್‌ ಪ್ರೈಧಿವೇಟ್‌ ಲಿಮಿಟೆಡ್‌ ಈ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಸಿನಿಮಾ ಟಿಕೆಟ್‌ ದರ 200ರೂ.ಗೆ ನಿಗದಿಪಡಿಸಿದ ಸರ್ಕಾರದ ನಿರ್ಧಾರ ಏಕಪಕ್ಷೀಯ ಆಗಿದೆ. ಕಾನೂನು ಬಾಹಿರ ಮತ್ತು ವಿವೇಚನಾರಹಿತ ಹಾಗೂ ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಸರ್ಕಾರ 2017ರಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಆ ನಂತರ ಸರ್ಕಾರ ಆದೇಶವನ್ನು ವಾಪಸ್‌ ಪಡೆಯಲಾಗಿತ್ತು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಸೆಪ್ಟೆಂಬರ್ 12ರಂದು ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿಏಕರೂಪ ಟಿಕೆಟ್‌ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಮಲ್ಟಿಪ್ಲೆಕ್ಸ್‌ಗಳು ನಡೆಸುತ್ತಿದ್ದ ದುಬಾರಿ ಟಿಕೆಟ್‌ ದರ ಲೂಟಿಗೆ ಕಡಿವಾಣ ಹಾಕುವ ಹಿನ್ನೆಲೆ, ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ನ ಮೂಲ ಬೆಲೆಯು 200 ರೂ. ದಾಟುವಂತಿಲ್ಲಎಂದು ಹೇಳಿತ್ತು. ಏಕಪರದೆ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ ದರ 200ರೂ ಆದರೆ, ಶೇ.18 ತೆರಿಗೆಯೂ ಸೇರಿ ಟಿಕೆಟ್‌ ದರವು 236 ರೂ. ಮಾಡಬಹುದಾಗಿತ್ತು. ಸದ್ಯ ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ.

- Advertisement -

Latest Posts

Don't Miss