ಹಿಜಾಬ್ ವಿವಾದ (Hijab Controversy) ಕುರಿತ ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ ಇಂದು ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (
Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ ಪ್ರಕಾರ ಸಾರ್ವಜನಿಕ ಸುವ್ಯವಸ್ಥೆ ನೈತಿಕತೆ ಮತ್ತು ಆರೋಗ್ಯ ಈ ನಿಬಂಧನೆಗಳಿಗೆ ಧಕ್ಕೆಯಾಗದಂತೆ ಎಲ್ಲಾ ವ್ಯಕ್ತಿಗಳ ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅವಕಾಶ ನೀಡಿದ್ದು ಮತ್ತು ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ, ಮತ್ತು ಪ್ರಚಾರ ಮಾಡುವ ಹಕ್ಕನ್ನು ಎಲ್ಲರೂ ಹೊಂದಿರುತ್ತಾರೆ ಎಂಬುದರ ಬಗ್ಗೆ ದೇವದತ್ ಕಾಮತ್ ವಾದ ಮಂಡಿಸಿದರು. ನಂತರ ಹೈಕೋರ್ಟ್ನ ತ್ರಿಸದಸ್ಯ ಪೀಠದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ (Chief Justice Rituraj Awasthi), ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹಿಜಾಬ್ ವಿಚಾರಣೆ ಮುಂದೂಡಿದೆ. 2:30ಕ್ಕೆ ಮುಂದೂಡಿದ್ದಾರೆ.
Hijab Controversy ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ..!
- Advertisement -
- Advertisement -