ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ನಿನ್ನೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಲಿಲ್ಲ, 6 ವಿದ್ಯಾರ್ಥಿನಿಯರು ನಿನ್ನೆ ಹಿಜಾಬ್ ಧರಿಸಿ ಬಂದಿದ್ದರು. ಈಗ ವಿದ್ಯಾರ್ಥಿಯೊಬ್ಬರು ಹಿಜಾಬ್ ಧರಿಸಿ ತರಗತಿಗೆ ಬರುವುದಕ್ಕೆ ಅವಕಾಶ ಕೊಡಬೇಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರೇಶಮ್ (Resham) ಎಂಬ ವಿದ್ಯಾರ್ಥಿನಿ ಸಂವಿಧಾನದ 14 ಮತ್ತು 25ನೇ ವಿಧಿ ಅಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ನಮ್ಮನ್ನು ತರಗತಿಗೆ ಪ್ರವೇಶಿಸಿದಂತೆ ತಡೆಯಲಾಗಿದೆ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹೋಗುತ್ತಿದ್ದೆವು ಆದರೆ ಕಾಲೇಜು ಆಡಳಿತ ಮಂಡಳಿ ನಮ್ಮನ್ನು ತಡೆದಿದೆ, ಇದರಿಂದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿ(PU College for Government Girls)ನಲ್ಲಿ ಈಗ ತರಿಸಲಾಗುತ್ತಿದೆ ಎಂಬ ಕಾರಣಕ್ಕೆ ಕಾಲೇಜಿಗೆ ಪ್ರವೇಶ ನೀಡುತ್ತಿಲ್ಲ, ಡಿಸೆಂಬರ್ 28 2021 ರಿಂದ ಪ್ರವೇಶ ನಿರ್ಬಂಧಿಸಲಾಗಿದೆ, ಪ್ರತಿಯೊಬ್ಬರಿಗೂ ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಭಾರತೀಯ ಸಂವಿಧಾನದಲ್ಲಿ ಅವಕಾಶವಿದೆ, ಧಾರ್ಮಿಕ ವಿಚಾರಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅಧಿಕಾರವಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಉಡುಪಿ ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರ ಹೋರಾಟಕ್ಕೆ ಅನೇಕ ಮುಸ್ಲಿಂ ಸಂಘಟನೆಗಳು (Muslim organizations) ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿ ಘಟಕವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಇದಕ್ಕೆ ಬೆಂಬಲ ಸೂಚಿಸಿದೆ. ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರುವುದಕ್ಕೆ ಹಿಂದೂ ಪರ ಸಂಘಟನೆಗಳು (Pro-Hindu organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಮುಂಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬರುತ್ತೇವೆ ಅಂತ ಘೋಷಿಸಿದ್ದಾರೆ.