Sunday, September 8, 2024

Latest Posts

Hijab Controversy : ಧಾರ್ಮಿಕ ಗುರುತು ಬಳಸುವಂತಿಲ್ಲ ಹೈ ಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ..!

- Advertisement -

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ (Hijab and saffron controversy) ಕುರಿತಂತೆ ಕರಾವಳಿ ಭಾಗದಲ್ಲಿ ಉಂಟಾದ ವಿವಾದ ಈಗ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ (Internationally) ತನ್ನ ಸ್ವರೂಪವನ್ನು ಪಡೆದುಕೊಂಡಿದೆ. ವಿದ್ಯಾರ್ಥಿನಿಯೊಬ್ಬರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಅರ್ಜಿಯನ್ನು ಹಾಕಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ (High Court) ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಫೆ.8, 9 ರಂದು ಎರಡು ದಿನಗಳ ಕಾಲ ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಧರ್ಮ ಸೂಕ್ಷ್ಮವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ(Rituraj Awasthi), ನ್ಯಾ.ಖಾಜಿ ಜೈಬುನ್ನೀಸಾ(khazi jaibunnisa), ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿ, ಹಿಜಬ್ ವಿವಾದ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ ಎಂದು ಹೈ ಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಮಧ್ಯಂತರ ಆದೇಶ (Interim order) ಹೊರಡಿಸಿದೆ. ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದ್ದಾರೆ. ಈ ವಿವಾದ ಕುರಿತಂತೆ ಕೆಲವು ದಿನಗಳಲ್ಲಿ ತೀರ್ಪನ್ನು ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -

Latest Posts

Don't Miss