ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ಧೀಕ್ಷಿತ್ (Justice Krishna S Dixit) ಹಿಜಾಬ್ ವಿಚಾರಣೆ ಧರ್ಮ ಸೂಕ್ಷ್ಮವಾಗಿರುವುದರಿಂದ ಅರ್ಜಿಯನ್ನು ಹೈಕೋರ್ಟ್ ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದರು. ಇನ್ನೂ ಹಿಜಾಬ್ ವಿಚಾರಣೆಯನ್ನು ತ್ರಿಸದಸ್ಯ ಪೀಠ ಸುಧೀರ್ಘವಾಗಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದರು. ನಿನ್ನೆ ತೀರ್ಪು ಪ್ರಕಟಿಸಿದ್ದು ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ (Supreme Court) ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಅರ್ಜಿಯ ತುರ್ತು ವಿಚಾರಣೆಗೆ ಕೋರ್ಟ್‌ನಿರಾಕರಿಸಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ (Udipi) ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಕುರಾನ್ (Quran) ಹೇಳಿದಂತೆ ನಡೆಯುತ್ತೇವೆ, ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ, ಉಡುಪಿ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್‌ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಮಂಗಳವಾರ ಸಂಜೆ ಸಲ್ಲಿಸಲಾಗಿತ್ತು. ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಹೈಕೋರ್ಟ್‌ಆದೇಶದ ವಿರುದ್ಧ ಸುಪ್ರೀಂಗೆ ಅರ್ಜಿ ಬುಧವಾರ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ (Justice N. V. Ramana) ಪೀಠದ ಮುಂದೆ ಬಂದಿತು. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಬುಧವಾರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾರ್ಚ್ 21ರ ಬಳಿಕ ಅರ್ಜಿಯ ವಿಚಾರಣೆ ನಡೆಸುವುದಾಗಿ ಕೋರ್ಟ್‌ಹೇಳಿದೆ.