- Advertisement -
ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣದಿಂದ ವಂಚಿತರಾಗುವುದು ಮೂಲಭೂತ ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗಿದೆ.
ಶಿಕ್ಷಣ ಪಡೆಯುವ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸದಂತೆ ಭಯಭೀತಗೊಳಿಸುವುದು, ಹತ್ತಿಕ್ಕುವುದು ಖಂಡಿತವಾಗಿಯೂ ದಬ್ಬಾಳಿಕೆಯ ಕ್ರಮವಾಗಿದೆ.
ಇದು ಮುಸ್ಲಿಂರ ಮೂಲಭೂಕ ಹಕ್ಕು, ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸುವ ಭಾರತದ ವ್ಯವಸ್ಥಿತ ಯೋಜನೆಯಾಗಿದೆ ಎಂದು ಆರೋಪಿಸಿದ್ದಾರೆ.
- Advertisement -