Friday, April 18, 2025

Latest Posts

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

- Advertisement -

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ.

10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದoತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ಯಾವುದೇ ವಾಹನಗಳ ಸಂಚಾರ ಇಲ್ಲದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು. ಇದೀಗ ಮತ್ತೆ ಇದೇ ಘಟನೆ ನಡೆದಿರುವುದು ಸಹಜವಾಗಿ ಮೈಸೂರಿನ ಜನತೆ ಅದರಲ್ಲೂ ಚಾಮುಂಡಿ ಬೆಟ್ಟಕ್ಕೆ ಹೊಂದಿಕೊoಡoತಿರುವ ಮನೆಗಳಲ್ಲಿ ವಾಸವಾಗಿರುವ ಜನರಲ್ಲಿ ಆತಂಕ ಮೂಡಿಸಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಟಿವಿ- ಮೈಸೂರು

- Advertisement -

Latest Posts

Don't Miss