Saturday, July 27, 2024

Latest Posts

ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

- Advertisement -

ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್ ನಾಯಕತ್ವವು ಶನಿವಾರ ರಾಜ್ಯದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸುಖು ಅವರನ್ನು ಮುಂದಿನ ಸಿಎಂ ಎಂದು ಘೋಷಿಸಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರನ್ನುಉಪಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ತೆರೆದ ಆಕಾಶದ ಅಡಿಯಲ್ಲಿ ನಡೆದ ಸಮಾರಂಭದಲ್ಲಿ  ಸುಖು ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಸೊಗಸಾಗಿದೆ “MR ಬ್ಯಾಚುಲರ್” ಚಿತ್ರದ ಹಾಡು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು. ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಕಾಂಗ್ರೆಸ್ ಹಿಮಾಚಲ ಪ್ರದೇಶ ಉಸ್ತುವಾರಿ ರಾಜೀವ್ ಶುಕ್ಲಾ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಮತ್ತು ಹಿರಿಯ ನಾಯಕ ಸಚಿನ್ ಪೈಲಟ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ರಾತ್ರಿ 11ರ ನಂತರ ಜನರನ್ನು ರಸ್ತೆಗಿಳಿಸುವುದಿಲ್ಲ ಎಂದು ದಂಪತಿಯಿಂದ ಹಣ ವಸೂಲಿ : ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು

ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ

- Advertisement -

Latest Posts

Don't Miss