ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ.
ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಲಹಾ ಸಮಿತಿಯೊಂದನ್ನ ಎಐಸಿಸಿ ರಚಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಮಂಡಳಿಯ ಮೊದಲ ಸಭೆ ಬೆಂಗಳೂರಿನಲ್ಲೇ ನಡೆಯುತ್ತಿದೆ.
ಹಿಂದುಳಿದ ವರ್ಗಗಳ ಅಗ್ರಗಣ್ಯ ನಾಯಕರಾಗಿರುವ ಸಿದ್ದರಾಮಯ್ಯ ಅವರ ವರ್ಚಸ್ಸನ್ನೇ ಬಳಸಿಕೊಂಡು, ದೇಶಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ದೇಶಾದ್ಯಂತ ಹಿಂದುಳಿದ ವರ್ಗಗಳ ಸಮಸ್ಯೆಗಳೇನು? ಅವರಿಗಿರುವ ಸವಾಲುಗಳು? ಅದಕ್ಕೆ ಪರಿಹಾರವೇನು ಅನ್ನೋದನ್ನ ಸಲಹೆ ನೀಡುವ ಕೆಲವರನ್ನು ಈ ಮಂಡಳಿ ಮಾಡುತ್ತದೆ. ಜೊತೆಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಲಹೆ ನೀಡಲಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ರಚನೆಯನ್ನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಅನುಮೂದಿಸಿದ್ರು. ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಈ ಮಂಡಳಿಯಲ್ಲಿ ಇರಲಿದ್ದಾರೆ.
ಈ ಸಲಹಾ ಮಂಡಳಿಯ ಚಟುವಟಿಕೆಗಳನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ಮುಂದಾಗಿದೆ. ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮೊದಲ ಸಭೆ ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿಗಳು, 10 ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಭಾಗವಹಿಸಲಿದ್ದಾರೆ.