- Advertisement -
State News:
ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂಥ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ಸರಿಯಲ್ಲ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿರ್ಮಾಣವಾಗಲಿದೆಯಾ ಪ್ರವೀಣ್ ನೆಟ್ಟಾರ್ ಕನಸಿನ ಮನೆ..?! ಕಟೀಲ್ ಭರವಸೆ ಮಾತೇನು..?!
- Advertisement -