- Advertisement -
www.karnatakatv.net: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಕ್ಕೆ ಕನ್ನ ಹಾಕಿ ದರೋಡೆಕೋರರು ನಗದು, ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗಿದ್ದಾರೆ.
ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಮತ್ತು ನಗದು ದೋಚಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲೇ ದೀಪಾವಳಿ ಹಬ್ಬ ಶುರುವಾಗಿದ್ದು, ಇದೇ ವೇಳೆ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು ‘ದೇವಿ ಮಾ’ ದೇಗುಲ. ದೇವಿಯ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿದ ಖದೀಮರು, 10 ತೊಲ ಬೆಳ್ಳಿ ಸರ ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 25 ಸಾವಿರ ರೂಪಾಯಿ ನಗದು ಕದ್ದಿದ್ದಾರೆ. ಪ್ರಕರಣದ ಕುರಿತು ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಭಗವಾನ್ ದಾಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Advertisement -