Friday, November 28, 2025

Latest Posts

BBMP ಕಸದ ಲಾರಿಯಲ್ಲಿ ಮಹಿಳೆಯ ಶವ:ಇದು ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ!

- Advertisement -

ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿಯೇ ಹತ್ಯೆ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಮೃತ ಪಟ್ಟ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ. ಆಕೆಯ ಜೊತೆಗೆ ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ವಿಚಾರ ತಿಳಿದು ಬಂದಿದೆ. ಆರೋಪಿ ಮೊಹಮ್ಮದ್ ಸಂಶುದ್ದೀನ್ ನನ್ನು ಪೊಲೀಸರು ಈಗ ಬಂಧಿಸಿದ್ದಾರೆ.

ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದಾಗ ಕಸದ ಲಾರಿಯಲ್ಲಿ ಯುವತಿಯ ತಲೆ ಕೂದಲು ಕಾಣಿಸಿತ್ತು. ಅವರು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಶವವೊಂದು ಮೂಟೆಕಟ್ಟಿ ಎಸೆದ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಹಂತಕನಿಗೆ ಶೋಧ ನಡೆಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರ ಕೈಗೆ ಹಂತಕ ಸಿಕ್ಕಿಬಿದ್ದಿದ್ದಾನೆ ನಂತರ ಕೊಲೆ ರಹಸ್ಯ ಬಯಲಾಗಿದೆ.

ಆರೋಪಿ ಅಸ್ಸಾಂನ 33 ವರ್ಷದ ಮೊಹಮ್ಮದ್ ಸಂಶುದ್ದೀನ್ , ಸುಮಾರು ಒಂದೂವರೆ ವರ್ಷಗಳಿಂದ 40 ವರ್ಷದ ಆಶಾ ಜೊತೆಗೆ ಸಂಬಂಧ ಹೊಂದಿದ್ದ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆಶಾ ಮತ್ತು ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ಸಂಶುದ್ದೀನ್ ಒಟ್ಟಿಗೆ ಹುಳಿಮಾವು ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆಶಾಳಿಗೆ ಪತಿ ಮೃತಪಟ್ಟ ಬಳಿಕ, ತನ್ನ ಇಬ್ಬರ ಮಕ್ಕಳೊಂದಿಗೆ ಶಂಶುದ್ದೀನ್‌ನೊಂದಿಗೆ ವಾಸವಿದ್ದಳು. ಇತ್ತ ಶಂಶುದ್ದೀನ್‌ ಸಹ ವಿವಾಹಿತನಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳು ಅಸ್ಸಾಂನಲ್ಲಿ ವಾಸವಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ಇಬ್ಬರೂ ಒಂದೇ ಮನೆ ಪಡೆದು ವಾಸವಿದ್ದರು.

ಮೊಹಮ್ಮದ್ ಸಂಶುದ್ದೀನ್ ನ ಪತ್ನಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿಯೇ ಇದ್ದಾರೆ. ಇಬ್ಬರ ನಡುವೆ ಉಂಟಾದ ಜಗಳ ದೈಹಿಕ ಹಲ್ಲೆಗೆ ತಿರುಗಿದ್ದು, ಆಶಾ ಸಾವಿನಲ್ಲಿ ಅಂತ್ಯವಾಗಿದೆ. ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಸಂಶುದ್ದೀನ್ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರು ದಕ್ಷಿಣ DCP ಲೋಕೇಶ್ ಬಿ. ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ. ಆಶಾ ಅವರನ್ನು ಕೊಲೆ ಮಾಡಿದ ನಂತರ ಆರೋಪಿ ಸಂಶುದ್ದೀನ್, ಮೃತದೇಹವನ್ನು ಬೈಕ್ ನಲ್ಲಿ ತಂದು ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದಾಗ ಹಂತಕ ಸಿಕ್ಕಿ ಬಿದ್ದಿದ್ದು, ಕೊಲೆ ರಹಸ್ಯ ಬಯಲಾಗಿದೆ.

- Advertisement -

Latest Posts

Don't Miss