Monday, July 22, 2024

Latest Posts

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

- Advertisement -

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ! ಕರ್ಮ ಜೀವನವನ್ನು ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ರಾಮನಾಗು.. ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ!ʼʼಎಂದು ಬರೆದುಕೊಂಡಿದ್ದಾರೆ.

ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಜಗ್ಗೇಶ್ ಅವರ ಟ್ವೀಟ್​ನ ಅರ್ಥವಾಗಿದೆ. ಈ ಮೂಲಕ ಅವರು ದರ್ಶನ್ ಮದ ಏರಿದ್ದು, ಅವರಿಗೆ ಕರುಣೆ ಎಂಬುದಿಲ್ಲ ಎಂದು ಜಗ್ಗೇಶ್ ತಿಳಿಸಿದ್ದಾರೆ. ತೋತಾಪುರಿ ಸಿನಿಮಾ ಚಿತ್ರೀಕರಣ ಸೆಟ್‌ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿ ಜಗ್ಗೇಶ್ ವಿರುದ್ಧ ಧಿಕ್ಕಾರ ಕೂಗಿದ್ದು ವಿವಾದ ಸೃಷ್ಟಿಸಿತ್ತು. ಬಳಿಕ ದರ್ಶನ್ ಅಭಿಮಾನಿಗಳು ಕ್ಷಮೆ ಕೋರುವಂತೆ ಜಗ್ಗೇಶ್​ಗೆ ಪಟ್ಟು ಹಿಡಿದಿದ್ದರು.

ಇನ್ನೂ ಡಿಬಾಸ್ ಬಂಧನ ಕುರಿತು ನಟ ಚೇತನ್ ಅಹಿಂಸಾ ಕೂಟ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರುʼʼಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ರಿಟ್ವೀಟ್ ಮಾಡಿರುವ ನಟಿ ರಮ್ಯಾ, ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ದರ್ಶನ್ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್

Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Darshan Arrest Case: ಆರೋಪಿಗಳು 13 ಅಲ್ಲ, 17 ಜನ!

- Advertisement -

Latest Posts

Don't Miss