Monday, September 9, 2024

Latest Posts

ಹಿಟ್ ಆ್ಯಂಡ್ ರನ್ ಪ್ರಕರಣ: ಬುಲೆರೋ ಗುದ್ದಿದ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಸಾವು

- Advertisement -

Dharwad News: ಧಾರವಾಡ: ಹಿಟ್ ಆ್ಯಂಡ್‌ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಬೈಕ್ ಸವಾರ ರೋಹಿತ್ ಜಗದೀಶ್ ಕುಂಬಾರ್ (20) ಬೈಕ್‌ನಲ್ಲಿ ಹೋಗುವಾಗ, ಹಿಂದಿನಿಂದ ಬುಲೆರೋ ಕಾರ್ ಬಂದು ಗುದ್ದಿದ್ದು, ಈ ರಭಸಕ್ಕೆ ಯುವಕ ರೋಹಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ರಾತ್ರಿ 12 ಗಂಟೆಗೆ ಈ ಘಟನೆ ನಡೆದಿದ್ದು, ರೋಹಿತ್ ಮದಿಹಾಳದ ಸಿದ್ಧಾರೂಢ ಕಾಲೋನಿ ನಿವಾಸಿಯಾಗಿದ್ದು, ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

- Advertisement -

Latest Posts

Don't Miss