Monday, June 23, 2025

Latest Posts

ಹಿಟ್ ಆ್ಯಂಡ್ ರನ್” ಹುಬ್ಬಳ್ಳಿ ಗ್ರಾಮೀಣ ಠಾಣೆ ASI ಯಲ್ಲಪ್ಪ ಕುಂಬಾರ್‌ ಸ್ಥಳದಲ್ಲಿ ಸಾ*ವು…!

- Advertisement -

Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ ಧಾರವಾಡದಲ್ಲಿನ ಮನೆ ಕಡೆ ಹೋಗುತ್ತಿದ್ದಾಗ, ಮೈಕ್ರೋಪಿನೀಶ್ ಪ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂದಿಸಿದ ಹಾಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಹಿಟ್ ಆಂಡ್ ಪ್ರಕರಣ ದಾಖಲು ಮಾಡಿಕೊಂಡು ಅಪಘಾತ ಮಾಡಿ ಪರಾರಿಯಾಗಿರುವ ವಾಹನದ ಪತ್ತೆಗೆ ಮುಂದಾಗಿದ್ದಾರೆ.

- Advertisement -

Latest Posts

Don't Miss