Thursday, December 12, 2024

Latest Posts

High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ

- Advertisement -

ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ‌ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ನ್ಯಾಯ ಪಡೆಯುವುದು ಪ್ರತಿಯೊಬ್ಬನ ನಾಗರೀಕನ ಹಕ್ಕು ಹೊರತು ವಿಶೇಷ ಸವಲತ್ತಲ್ಲ. ಇದಕ್ಕೆ ಬಡವ, ಶ್ರೀಮಂತ ಮುಂತಾದ ಯವುದೇ ಮಾನದಂಡವಿಲ್ಲ. ಕಾನೂನಿನ ಮುಂದೆ ವ್ತಕ್ತಿಯ ಸಾಮಾಜಿಕ , ಆರ್ಥಿಕ ಅರ್ಹತೆ ಯಾವುದೇ ಪ್ರಭಾವ ಬೀರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ನಾಯಾಧೀಶರು, ವಕೀಲರು ಶ್ರಮಿಸಬೇಕು. ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 2,72,041 ಪ್ರಕರಣಗಳು ಬಾಕಿ ಉಳಿದಿದ್ದು, ಇವುಗಳನ್ನು‌ ಬೇಗ ವಿಲೇವಾರಿ ಮಾಡಬೇಕು ಎಂದರು
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ‌.

ಇದನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.ಈ ಸಂದರ್ಭದಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರುಗಳು, ಹೆಚ್ಚುವರಿ ಸಾಲಿಸಿಟರ್ ಜನರಲ್ ಶಾಂತಿಭೂಷಣ್, ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Panchayat Opening: ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

Chikballapura: ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಧ್ವಜಾರೋಹಣ

Narendra Modi : 77ರ ಸ್ವಾತಂತ್ರ್ಯ ಸಂಭ್ರಮಕ್ಕೆ ಪ್ರಧಾನಿ ವಿಭಿನ್ನ ಶೈಲಿ ಉಡುಪು …!

- Advertisement -

Latest Posts

Don't Miss