Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ.
ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ ಚಿಂತೆಗೀಡಾಗಿದ್ದೀರಿ..! ಆದರೆ, ನೀವು ಉತ್ತರಿಸಬೇಕಾದ ನಿಜವಾದ ಪ್ರಶ್ನೆಗಳಿವೆ, ಮರಿ ಅಶೋಕ್ ಏಕೆ ‘ಗಣವೇಶ’ ಧರಿಸಿಲ್ಲ? ಮರಿ ಅಶೋಕ್ ಏಕೆ ಗೋಶಾಲೆಯಲ್ಲಿ ಗೋಮೂತ್ರ ಸೇವಿಸುತ್ತಿಲ್ಲ? ಮರಿ ಅಶೋಕ್ ಇನ್ನೂ ‘ಧರ್ಮರಕ್ಷಕ’ನಾಗಿ ಏಕೆ ಆಗಿಲ್ಲ? ಹಿರಿ ಅಶೋಕ್ ಅವರು ಈ ಪ್ರಶ್ನೆಗಳಿಗೆ ಯಾವಾಗ ಉತ್ತರಿಸುತ್ತಾರೆ? ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಬಹಳ ಮುಖ್ಯವಾಗಿ, ಶಿವಶಂಕರಪ್ಪ ಸಾಹುಕಾರ್ ಬಗ್ಗೆ ಯಾವಾಗ ಮಾತನಾಡುತ್ತೀರಿ? ಬಸವರಾಜ ಕನ್ನಾಳೆ ಬಗ್ಗೆ ಯಾವಾಗ ಮಾತನಾಡುತ್ತೀರಿ? ಕೆಪಿಎಸ್‌ಸಿ (KPSC) ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ನಾಯಕರಿಗೆ ಎಷ್ಟು ಹಣ ಸಂದಾಯವಾಗಿದೆ ಎಂಬುದರ ಬಗ್ಗೆ ಯಾವಾಗ ಮಾತನಾಡುತ್ತೀರಿ? ನಿಮ್ಮ ಪಕ್ಷಕ್ಕೆ ಸೇರಿದವರ ಚಿತ್ರಗಳ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಿ? ಎಂದು ಆರ್.ಅಶೋಕ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.




