Tuesday, March 25, 2025

Latest Posts

ಹನಿಟ್ರ್ಯಾಪ್ ವಿಚಾರ: ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು‌ ಸಭ್ಯತೆಯ‌ ಲಕ್ಷಣವಲ್ಲ ಅವರ ಅಸಭ್ಯತೆಯಿಂದಲೇ ಅಮಾನತ್ತು ಮಾಡಲಾಗಿದೆ. ಅವರ ವರ್ತನೆ ವಿಕೋಪಕ್ಕೆ ಹೋದ ಹಿನ್ನೆಲೆ ವಿರೋಧ ಪಕ್ಷದ ಶಾಸಕರನ್ನ ಅಮಾನತ್ತು ಮಾಡಲಾಗಿದೆ. ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆಯನ್ನ ಹುಟ್ಟು ಹಾಕಿದ್ದೇ ನಮ್ಮ ಪಕ್ಷದವರು. ನಮ್ಮ ಪಕ್ಷದ ಮಂತ್ರಿಗಳು ಇದನ್ನ‌ ಆಂತರಿಕವಾಗಿ ಚರ್ಚೆ ಮಾಡಬೇಕಿತ್ತು. ಆದ್ರೆ ಬಹಿರಂಗವಾಗಿ ಸದನದಲ್ಲಿ ಆ ಬಗ್ಗೆ ಚರ್ಚೆ ಮಾಡಬಾರದಿತ್ತು. ಇದರಿಂದಾಗಿ ಪಕ್ಷಕ್ಕೆ‌ ಮುಜುಗರ, ಅಭದ್ರತೆ ಹೆಚ್ಚಾಗುತ್ತೆ ಎಂದು ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ‌ ಅಧಿಕಾರ ಹಂಚಿಕೆ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮೊಯ್ಲಿ, ಪಕ್ಷದಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆಗಳಾಗಬಾರದು. ಇಂತಹ ಚರ್ಚೆಗಳಿಂದ ಸರ್ಕಾರಕ್ಕೆ ಅಭದ್ರತೆ ಕಾಡುವುದು ನಿಶ್ಚಿತ. ವಿರೋಧ ಪಕ್ಷದವರು ಅದನ್ನೇ ಅಸ್ತ್ರವನ್ನಾಗಿ ಬಳಕೆ ಮಾಡುತ್ತಾರೆ. ವಿರೋಧ ಪಕ್ಷದವರಿಗೆ ಅಸ್ತ್ರವನ್ನಾಗಿ ಮಾಡಿಕೊಳ್ಳುವ ಪರಿಸ್ಥಿತಿ ತಂದುಕೊಳ್ಳುವುದು ಸರಿಯಲ್ಲ. ಪವರ್ ಶೇರಿಂಗ್ ವಿಚಾರ ಈ ಮೊದಲೇ ನಿರ್ಣಯವಾಗಿದೆಯೋ ಗೊತ್ತಿಲ್ಲ. ಆ‌ ಬಗ್ಗೆ ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತೆ. ಆದ್ರೆ ಪಕ್ಷದಲ್ಲಿ ಈ ಆಂತರಿಕ‌ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದು ಸ್ವಪಕ್ಷದವರ ನಡೆ ವಿರುದ್ಧವೇ ವೀರಪ್ಪ ಮೊಯ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಗೆ ಜನಸಂಖ್ಯೆ ಮಾನದಂಡ ಆಗಬಾರದು. ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆ ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಬಾರದು. ಭೌಗೋಳಿಕ ಅಂಶಗಳನ್ನು ಪರಿಗಣಿಸದಿದ್ದರೆ ದೇಶದ ಸಮಗ್ರತೆಗೆ ಭಂಗ ಬರುವ ಸಾಧ್ಯತೆಗಳಿವೆ. ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಜನಸಂಖ್ಯೆ ಯನ್ನು ನಿಯಂತ್ರಣ ಕ್ಕೆ ತರುವಲ್ಲಿ ಯಶಸ್ವಿಯಾಗಿವೆ.

ಲೋಕಸಭೆ ಕ್ಷೇತ್ರ ಮರು ವಿಗಂಡಣೆಯಲ್ಲಿ ಜನಸಂಖ್ಯೆಯನ್ನು ಮಾನದಂಡ‌ ಸರಿಯಲ್ಲ. ಇದನ್ನ ಪರಿಗಣಿಸಿದರೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿದ್ದಕ್ಕೆ ಶಿಕ್ಷೆ ಕೊಟ್ಟಂತೆ ಆಗಲಿದೆ. ಲೋಕಸಭೆ ಕ್ಷೇತ್ರ ಮರು ವಿಂಗಡಣೆಯಲ್ಲಿ ಜನಸಂಖ್ಯೆ ಮಾನದಂಡ ಆಗಬಾರದು. ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದರೆ‌ ಆಡಳಿತಾತ್ಮಕ ತೊಂದರೆ ಆಗಲಿದೆ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳಿಗೆ ಲಾಭವಾಗಲಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

- Advertisement -

Latest Posts

Don't Miss