Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ.
ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು ಮತ್ತು ನನ್ನ ಹಿತೈಷಿಗಳು ಮತ್ತು ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ. ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಸುಮಲತಾ ಬರೆದುಕೊಂಡಿದ್ದಾರೆ.
ಕಾಂಗ್ರೆಸ್‌ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ: ಸಂಸದ ಬಚ್ಚೇಗೌಡ