Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರವಾಗಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವವಿದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು ಎಂದು ಹೇಳಿದರು.
ಇನ್ನು ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ನನಗೆ ಬಹಳ ಸಂತೋಷವಾಗಿದೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ, ದೇಶಕ್ಕೆ ಎಣೆ ಇಲ್ಲದ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಿ ಗೌರವಿಸಿದ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳೂ ಆಗಿರುವ ಶ್ರೀ ಥಾವರಚಂದ್ ಗೆಹಲೋತ್ ಇತರೆ ಎಲ್ಲಾ ಗಣ್ಯರಿಗೂ ಧನ್ಯವಾದಗಳು ಎಂದಿದ್ದಾರೆ.
ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ನನಗೆ ಬಹಳ ಸಂತೋಷವಾಗಿದೆ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ, ದೇಶಕ್ಕೆ ಎಣೆ ಇಲ್ಲದ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿಗಳಿಗೆ… pic.twitter.com/4WZgz8II57— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 17, 2023