ಕೋಲಾರ : ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು ಕೆಲಸ ಮಾಡುತ್ತಿದ್ದಾರೆ , ನಿಷ್ಠಾವಂತ ಕಾರ್ಯಕರ್ತರು ಯಾರು ಎಂದು ತೀರ್ಮಾನ ಮಾಡ್ತಾರೆ. ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ. ಕ್ಷೇತ್ರದಲ್ಲಿ ಎಲ್ಲರೂ ಒಟ್ಟಾಗಿ ಬಿಜೆಪಿ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ವಿಜಯ್ ಕುಮಾರ್ ಹೇಳಿದ್ದಾರೆ.
‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’
‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’