Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ.
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ ಓವರ್ಟೇಕ್ ಮಾಡುವಾಗ ಕಂಟ್ರೋಲ್ ತಪ್ಪಿ ಅಪಘಾತ ಅಪಘಾತ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಹಾಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರಿಗೂ ತಲೆಗೆ ಗಾಯ ಆಗಿದೆ. ಸದ್ಯ ಇಬ್ಬರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.