ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಲ್ಲಿ ಈ ತಂಡ ಸಮೀಕ್ಷೆ ನಡೆಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ನಾವು ಗುಪ್ತಚರ ಸಂಸ್ಥೆಯಿಂದ ಬಂದಿದ್ದೇವೆಂದು ಎಂದು ತಂಡದ ಸದಸ್ಯರು ಹೇಳಿಕೊಂಡಿದ್ದರು ಎನ್ನುವ ಮಾಹಿತಿ ಇದೆ.
ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ
ವಿಧಾನಸಭೆ ಚುನಾವಣೆ ಕುರಿತು ಪ್ರತಿಯೊಬ್ಬರಿಂದ ಮಾಹಿತಿ ಕಲೆ ಹಾಕುತ್ತಿದ್ದೇವೆ. ಬರುವ ಚುನಾವಣೆಯಲ್ಲಿ ನೀವು ಯಾವ ಪಕ್ಷಕ್ಕೆ ಮತ ಚಲಾಯಿಸುತ್ತೀರಿ? ಯಾವ ಪಕ್ಷ ಗೆದ್ದರೆ ಉತ್ತಮ? ಎನ್ನುವ ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆಹಾಕುತ್ತಿದ್ದರು ಎಂದು ಅಲ್ಲಿನ ಸ್ಥಳೀಯರು ಪೊಲೀಸರ ಬಳಿ ತಿಳಿಸಿದ್ದಾರೆ. ನಂತರ ಸರ್ವೆ ನಡೆಸುತ್ತಿದ್ದವರ ಬಳಿ ಖಾಸಗಿ ಕಂಪನಿಯ ಐ.ಡಿ. ಕಾರ್ಡ್‌ಗಳು ಪತ್ತೆಯಾಗಿವೆ. ಈ ತಂಡ ಯಾವುದೇ ಬಗೆಯ ಅನುಮತಿ ಪಡೆದಿದೆಯಾ? ಯಾರು ಅನುಮತಿ ಕೊಟ್ಟಿದ್ದಾರೆ ಎನ್ನುವುದರ ಬಗ್ಗೆಯೂ ಹೊಸಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನುವ ಮಾಹಿತಿ ಇದೆ.
ಕೋವಿಡ್ ನಿಯಂತ್ರಣದ ಬಗ್ಗೆ ಇಂದು ಪ್ರಧಾನಿ ಮೋದಿ ಕೇಂದ್ರ, ರಾಜ್ಯಗಳ ಆರೋಗ್ಯ ಮಂತ್ರಿಗಳೊಂದಿಗೆ ಸಭೆ