- Advertisement -
ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ.
ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ ಮಗನ ಶವ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿದೆ ಎಂದು ಕರೆ ಬಂದಿದ್ದು, ಕೂಡಲೇ ಆಸ್ಪತ್ರೆಗೆ ಧಾವಿಸಿದ್ದಾರೆ. ಆದ್ರೆ, ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮಗನ ಶವ ನೀಡಲು 50,000 ರೂ.ಗಳ ಬೇಡಿಕೆ ಇಟ್ಟಿದ್ದಾರೆ.
ಬಡತನದ ಬೇಗೆಯಲ್ಲಿರುವ ದಂಪತಿಗಳ ಬಳಿ ಇಷ್ಟೊಂದು ಹಣ ಇಲ್ಲದಿರುವ ಕಾರಣ, ಮನೆ ಮನೆಗೆ ಅಲೆದು ಹಣವನ್ನು ಸಂಗ್ರಹಿಸಲು ಮುಂದಾಗಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಘಟನೆ ಬಗ್ಗೆ ಬಾರಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
- Advertisement -