- Advertisement -
www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಅವಘಡದ ವೇಳೆ, ಲಕ್ಷ್ಮಮ್ಮ ಅವರ ಮಗ ವೆಂಕಟೇಶ್ ಹಾಗೂ ಮೊಮ್ಮಗ ಅಂಗಡಿಗೆ ತೆರಳುತ್ತುದ್ದರು ಎಂದು ತಿಳಿದುಬಂದಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ
- Advertisement -