Wednesday, October 15, 2025

Latest Posts

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

- Advertisement -

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು ಮಾಡಲು ಕೋರಿ, ಸಿದ್ದರಾಮಯ್ಯಗೆ ಸಚಿವ ಚಲುವರಾಯಸ್ವಾಮಿ ಪತ್ರದ ಮೂಲಕ ಮನವಿ ಮಾಡಿದ್ರು.

ಇದಕ್ಕೆ ಟ್ವೀಟ್‌ ಮೂಲಕ ಆರ್.‌ ಅ‌ಶೋಕ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು, ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ, ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಎಷ್ಟು ದಿವಾಳಿ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ.

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು “ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು” ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಅವರು, “ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ, ಇದೇ ರೀತಿ ಮುಂದುವರಿದೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಸೇರಿದಂತೆ, ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಎಂದಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಅಂತಾ ಆಗ್ರಹಿಸಿದ್ದಾರೆ.

- Advertisement -

Latest Posts

Don't Miss