Political News: ರೈತರ ಸಂಕಷ್ಟ ಕಾಣಲಾರದೇ, ಸಿಎಂ ಸಿದ್ದರಾಮಯ್ಯ, ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಕೋಟಿ ಕೋಟಿ ಕೊಡಲು ಹೊರಟಿದ್ದಾರೆಂದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅಲ್ಲದೇ, ನಂದಿನಿ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ.
ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು ಮೀನ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ 1,000 ಕೋಟಿ ನೀಡಲು ಹೊರಟಿದೆ. ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ತನ್ನ ಅವೈಜ್ಞಾನಿಕ ನೀತಿಗಳಿಂದ ಹಾಲು ಒಕ್ಕೂಟಗಳನ್ನ ನಾಶ ಮಾಡುತ್ತಿದೆ. ನಮ್ಮ ನಾಡಿನ ರೈತರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಗೆ ಮಸಿ ಬಳಿಯಬೇಡಿ ಸಿಎಂ ಸಿದ್ದರಾಮಯ್ಯನವರೇ. ಅಮೃತ ನೀಡುವ ರೈತರಿಗೆ ವಿಷ ಉಣಿಸುವ ಪಾಪದ ಕೆಲಸ ಮಾಡಬೇಡಿ ಎಂದು ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’
ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

