ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರ ಕಣ್ಣೀರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ NDRF ಪರಿಹಾರಕ್ಕೇರಿಕೆ ಆಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ಕಲಬುರಗಿ, ವಿಜಯಪುರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, ಈ ಪ್ಯಾಕೇಜ್ ಪ್ರಕಟಿಸಿದರು. ಈಗಾಗಲೇ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನೂ 5 ಲಕ್ಷ ಹೆಕ್ಟೇರ್ ಪ್ರದೇಶದ ಸಮೀಕ್ಷೆ ಮಳೆಯಿಂದಾಗಿ ವಿಳಂಬವಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣ ಪರಿಹಾರ ವಿತರಣೆ ಪ್ರಾರಂಭವಾಗಲಿದೆ ಎಂದರು.
ಏನೆಲ್ಲಾ ಹಾನಿ?
ಮಾನವ ಹಾನಿ: 52 ಮಂದಿ
ಜಾನುವಾರು ಹಾನಿ: 422
ಮನೆ ಹಾನಿ: 547
ಪರಿಹಾರ ಎಷ್ಟು?
ಪೂರ್ಣ ಮನೆ ಹಾನಿ: ₹1.20 ಲಕ್ಷ
ಅನಧಿಕೃತ ಮನೆ ಹಾನಿ: ₹1 ಲಕ್ಷ
ಭಾಗಶಃ ಹಾನಿ: ₹50 ಸಾವಿರ ಘೋಷಣೆ
ರಾಜ್ಯದಲ್ಲಿ ಪ್ರವಾಹ ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಗೆ ಹೆಚ್ಚುವರಿ ನೆರವು ನೀಡುವಂತೆ ಪ್ರಧಾನಮಂತ್ರಿ, ಕೃಷಿ ಸಚಿವರು ಹಾಗೂ ವಿತ್ತ ಸಚಿವರಿಗೆ ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇನ್ನು ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ಷೇಪ ವ್ಯಕ್ತ ಮಾಡಿದ್ದಾರೆ. ಎಕರೆಗೆ 25 ರಿಂದ 30 ಸಾವಿರ ಕೋಡಬೇಕು ಸರ್ಕಾರ ನುಣುಚಿಕೊಳ್ಳಬಾರದು ಎಂದು ಹೇಳಿದ್ದಾರೆ. ಈ ಹಿಂದೆ ಬಿ ಎಸ್ ಯಡಿಯೂರಪ್ಪ ಮನೆ ಹಾನಿಗೆ 5 ಲಕ್ಷ ಘೋಷಣೆ ಮಾಡಿದ್ರು ಎಂದರು. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೆಜ್ ಘೋಷನೆ ಮಾಡಬೇಕು ಎಂದು ಮನವಿ ಮಾಡಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

