Udupi News: 2023-24ನೇ ಸಾಲಿನ ಉಡುಪಿ ಜಿಲ್ಲಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ವತಿಯಿಂದ, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ, ಕೊಡುವ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಯಿತು.
ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಣಯ್ ಶೆಟ್ಟಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ 8ನೇ ತರಗತಿ ವಿದ್ಯಾರ್ಥಿನಿ, ಅನ್ವಿ ಎಚ್ ಅಂಚನ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ನೀಡಿ, ಗೌರವಿಸಿದರು.
ವಿದ್ಯಾರ್ಥಿಗಳಿಗೆ ಪ್ರಶಸ್ತಿಯೊಂದಿಗೆ 10 ಸಾವಿರ ನಗದು ಪುರಸ್ಕಾರವನ್ನು ನೀಡಲಾಯಿತು. ಪ್ರಣಯ್ ಪ್ರಶಾಂತ್ ಶೆಟ್ಟಿ ಮತ್ತು ಸಾರಿಕಾ ಶೆಟ್ಟಿ ಪುತ್ರನಾಗಿದ್ದು, ಅನ್ವಿ ಎಚ್.ಅಂಚನ್, ಹರೀಶ್ ಅಂಚನ್ ಮತ್ತು ಶೋಭಾ ದಂಪತಿಯ ಪುತ್ರಿಯಾಗಿದ್ದಾಳೆ.


ವಿದ್ಯಾನಗರ ಪೊಲೀಸರ ಕಾರ್ಯಾಚರಣೆ; ಅಕ್ರಮ ಸ್ಪಿರಿಟ್ ಸಾಗಟಾದ ಗ್ಯಾಂಗ್ ಜೈಲಿಗೆ
‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’



