Tuesday, October 15, 2024

Latest Posts

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

- Advertisement -

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ ತಿಳಿಸಿದ್ದಾರೆ. ಹಾಗೂ ನಾವು ಈಗಾಗಲೇ ಕೇಂದ್ರದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದು, ಫಲಿತಾಂಶದ ನಂತರವೂ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

- Advertisement -

Latest Posts

Don't Miss