- Advertisement -
ನವದೆಹಲಿ: ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಜೇಷ್ಠತೆ ಆಧಾರದಲ್ಲಿ ಬಡ್ತಿಯಲ್ಲಿ ಮೀಸಲಾತಿ ಬಯಸಿರುವ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ನೌಕರರಲ್ಲಿ ಸಂತಸ ತಂದಿದೆ.
ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಕಳೆದ ಫೆಬ್ರವರಿಯಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಇದಕ್ಕೆ ರಾಷ್ಟ್ರಪತಿ ಅನುಮೋದನೆ ಕೂಡ ದೊರಕಿತ್ತು. ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸರ್ವೋಚ್ಚ ನ್ಯಾಯಾಲಯವು ರಾಜ್ಯ ಸರ್ಕಾರದ ಈ ಕಾಯ್ದೆಯನ್ನ ಎತ್ತಿ ಹಿಡಿದಿದೆ.
ಆದರೆ ಸೀನಿಯಾರಿಟಿ ಆಧಾರದ ಮೇಲೆ ಬಡ್ತಿ ಪಡೆದುಕೊಳ್ಳುವ ಸಾಮಾನ್ಯ ವರ್ಗದ ನೌಕರರಿಗೆ ಹಿನ್ನಡೆಯುಂಟಾಗಲಿದೆ ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ.
- Advertisement -