ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ.  ಈಗಾಗಲೇ ಸಿಎಂ ಇರೋವಾಗ ಅವರಿವರು ಸಿಎಂ ಆಗಬೇಕು ಅನ್ನೋ ಮಾತುಗಳು ಯಾಕೆ ಹೇಳುತ್ತಿದ್ದಾರೆ ಅಂತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸರ್ಕಾರ ವಿಸರ್ಜಿಸೋದೇ ಉತ್ತಮ’

ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ ಯಾರೊಬ್ಬರು ಗೊಂದಲ ಬಗೆಹರಿಸಿಕೊಳ್ಳುತ್ತಿಲ್ಲ. ಇಂತಹ ಉಸಿರುಗಟ್ಟುವ ವಾತಾವರಣ ಕೆಲಸ ಮಾಡೋದಕ್ಕೆ ಕಷ್ಟವಾಗುತ್ತಿದೆ, ಅಧಿಕಾರಿಗಳೂ ಕೂಡ ಈ ಗೊಂದಲದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಜನರೂ ಕೂಡ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸಿ ಮಧ್ಯಂತರ ಚುನಾವಣೆ ನಡೆಸೋದು ಉತ್ತಮ ಅಂತ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

About The Author