- Advertisement -
ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ ಬೆಂಬಲ ಇರುತ್ತದೆ ಅಂತ ಹೇಳಿದ್ದಾರೆ.
ತಮ್ಮ 87 ನೇ ಹುಟ್ಟು ಹಬ್ಬದ ಅಂಗವಾಗಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಟುಂಬಸಹಿತ ತೆರಳಿರೋ ದೇವೇಗೌಡರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
- Advertisement -