ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರೋ ಸಿಎಂ ಕುಮಾರಸ್ವಾಮಿ,’ ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ , ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ.’ಅಂತ ಟ್ವೀಟ್ ಮಾಡಿದ್ದಾರೆ.
‘ದೇವೇಗೌಡರು ರಾಜ್ಯದ ಪಾಲಿಗೆ ತಂದೆ ಸ್ಥಾನದಲ್ಲಿದ್ದಾರೆ’