- Advertisement -
ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.
ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ ಅಭಿಮಾನಿಯೊಬ್ಬರ ಮನೆಯ ಗೃಹಪ್ರವೇಶ ಸಮಾರಂಭಕ್ಕೆ ಯಶ್ ಹಾಜರಾಗಲಿದ್ದಾರೆ.
ಇನ್ನು ಯಶ್ ಭೇಟಿ ಹಿನ್ನೆಲೆಯಲ್ಲಿ ಬೆಸಗರಹಳ್ಳಿಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆದಿದೆ.
- Advertisement -