ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜನತೆ ನೀರಿಗಾಗಿ ತುಂಬಾ ಕಷ್ಟಪಡುತ್ತಿದ್ದಾರೆ. ಈಗಾಗಲೇ ರೇಷನ್ ಮೂಲಕ ಕುಡಿಯುವ ನೀರನ್ನು ಜಿಲ್ಲಾಡಳಿತ ವಾರಕ್ಕೆ 2 ರಿಂದ 3 ದಿನ ಮಾತ್ರ ಜನರಿಗೆ ನೀರು ವಿತರಣೆ ಮಾಡುತ್ತಿದೆ. ಶ್ರೀ ಕ್ಷೇತ್ರದ ಧರ್ಮಸ್ಥಳದಲ್ಲಿಯೂ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಶು ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ.ಆದುದರಿಂದ ಭಕ್ತಾದಿಗಶಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸಿ ಅಂತ ಮನವಿ ಮಾಡಿಕೊಂಡಿದ್ದಾರೆ.
