Thursday, November 30, 2023

Latest Posts

ಶಕ್ತಿ ಇದ್ದರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ- ಸಿದ್ದುಗೆ ಶೋಭಾ ಸವಾಲ್

- Advertisement -

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ. ಸಿದ್ದರಾಮಯ್ಯ ಸಿ ಎಂ ಆಗುವ ಕನಸು ಕಾಣುತ್ತಿದ್ದು, ತಮ್ಮನ್ನು ತಾವೇ ದೇವರಾಜ ಅರಸುರವರಿಗೆ  ಹೋಲಿಸಿಕೊಳ್ಳುತ್ತಿದ್ದಾರೆ. ಅರಸು ಅವರನ್ನ ಹೋಲಿಸಿಕೊಳ್ಳುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಅಂತ ತೀವ್ರ ವಾಗ್ದಾಳಿ ನಡೆಸಿದ್ರು.

ಕೈ ಲಾಗದವರು ಮೈ ಪರಚಿಕೊಂಡರು ಎನ್ನುವ ಸ್ಥಿತಿಯಲ್ಲಿ ಸಿದ್ದರಾಮಯ್ಯನವರಿದ್ದಾರೆ. ಪ್ಯಾಕೇಜ್ ಗೆ ಡೀಲ್ ಆಗುವ ದಾರಿದ್ರ್ಯ ಜಾಧವ್ ಕುಟುಂಬಕ್ಕೆ ಬಂದಿಲ್ಲ. ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಯಡಿಯೂರಪ್ಪ ನವರು ನಾನು ಮುಖ್ಯಮಂತ್ರಿ ಆಗ್ತಿನಿ ಅಂತಾ ಎಲ್ಲಿಯೂ ಹೇಳಿಲ್ಲ. ಬದಲಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ಹೇಳಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಉದ್ದೇಶದಿಂದ ಅವರ ಶಾಸಕರನ್ನ ಬಡಿದೆಬ್ಬಿಸುತ್ತಿದ್ದಾರೆ.

ಹಾಗೆ ಡಿಕೆಶಿಗೆ ಚುನಾವಣಾ ಜವಾಬ್ದಾರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ, ಕಮೀಷನ್ ಹೊಡೆದ ದುಡ್ಡಿನ ಚೀಲವನ್ನ ತೆಗೆದುಕೊಂಡು ಹೋಗುತ್ತಾರೆ. ಹೀಗಾಗಿ ಕಾಂಗ್ರೆಸ್ ನವರು ಡಿಕೆಶಿ ಗೆ ಚುನಾವಣೆ ಉಸ್ತುವಾರಿ ನೀಡುತ್ತಾರೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ರು.

- Advertisement -

Latest Posts

Don't Miss