Sunday, December 22, 2024

Latest Posts

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

- Advertisement -

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕರ್ನಾಟಕಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕ್ರೀಡಾ ಸಚಿವರಾದ ನಾರಾಯಣಗೌಡರು, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕ್ಯಾಲ್ಸಿಯಂ ಕೊರತೆಗೆ ಪರಿಹಾರಗಳು..!

ಜನ ನಿಮ್ಮನ್ನು ಇಷ್ಟಪಡಬೇಕೆಂದರೆ ಈ ಕೆಲಸಗಳನ್ನು ಮಾಡಿ..

- Advertisement -

Latest Posts

Don't Miss