Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ ಹಾಗೂ ಜೈನ್ ಮುನಿಗಳಿಗೆ ಆತಂಕವನ್ನುಂಟು ಮಾಡಿದೆ ಎಂದರು.
ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ಸಿಎಮ್ ಇದುವರೆಗೂ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು ಎಂದು ಗಳಗಳನೆ ಕಣ್ಣೀರು ಸುರಿಸಿದ ಜೈನಮುನಿ ಗುಣಧರನಂದಿ ಮಹಾರಾಜರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖನ ಮಾಡುತ್ತೇನೆ ಎಂದು ಅವರು ಹೇಳಿದರು.
ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?
ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..