ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ.

ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಹಣಕಾಸಿನ ವಿಷಯದ ವಿವಾದ ವಿಕೋಪಕ್ಕೆ ಹೋಗಿ ಸನ್ಮೂನ್ ಕಬಾಡೆ ಎಂಬಾತನಿಗೆ ಅನಿಲ್ ಎಂಬಾತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಇದೀಗ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ

About The Author