Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇಂದು ಹುಬ್ಬಳ್ಳಿಯ ಲವ ಜಿಹಾದ್ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಇತ್ತೀಚಿನ ಲವ್ ಜಿಹಾದ್ ಪ್ರಕರಣವು ಇಡೀ ಸಮಾಜ ತಲೆತಗ್ಗಿಸುವಂತದ್ದು. ರಾಜ್ಯದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣದ ಪರಿಣಾಮವಾಗಿಯೇ ಇಂತಹ ಘಟನೆಗಳು ಸಂಭವಿಸುತ್ತಿದ್ದು, ಸಮಾಜ ವಿದ್ರೋಹಿ ಶಕ್ತಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದಂತಾಗಿದೆ ಎಂದು ಪ್ರಹ್ಲಾದ್ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಮತ್ತು ಸಂತ್ರಸ್ತೆ ಹಾಗೂ ಆಕೆಯ ಕುಟುಂಬಕ್ಕೆ ಶೀಘ್ರವಾಗಿ ನ್ಯಾಯ ಸಿಗಬೇಕು ಎಂದು ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

ಸಂತ್ರಸ್ಥೆಯರ ಚಿತ್ರ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು ಹಾಗೂ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಬಿಗಿ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.




